08354-235070 kar.bayalataacademy.bagalkot@gmail.com
ಬಾಗಲಕೋಟಕರ್ನಾಟಕ

ರೆಜಿಸ್ಟ್ರಾರರು

ಅಕಾಡೆಮಿಯ ರೆಜಿಸ್ಟ್ರರು ಅಕಾಡೆಮಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿರಬೇಕು. ಅವರು ಅಕಾಡೆಮಿಯು ಸ್ಥಾಪಿಸಬಹುದಾದ ಸ್ಥಾಯಿ ಸಮಿತಿ ಮತ್ತು ಇತರ ಸಮಿತಿಯ ಪದನಿಮಿತ್ತ ಸದಾಯ-ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಬೇಕು.

 ರೆಜಿಸ್ಟ್ರಾರರ ಕರ್ತವ್ಯಗಳು ಕೆಳಕಂಡಂತಿರುತ್ತವೆ .

೧. ಆಕಾಡೆಮಿಯ ದಾಖಲೆಗಳನ್ನು ಮತ್ತು ಅಚಿತಹ ಇತರ ಸ್ವತ್ತುಗಳನ್ನು ಸಂರಕ್ಷಿಸುವದು

೨. ಅಕಾಡೆಮಿಯ ಪರವಾಗಿ ಅಧಿಕೃತ ಪಾತ್ರ ವ್ಯವಹಾರ ನಡೆಸುವದು

೩. ಆಕಾಡೆಮಿಯ ಸಂಪೂರ್ಣ ಆಡಳಿತ ನಿರ್ವಹಣೆ ಹಾಗು ಸಿಬ್ಬಂದಿಯ ಮೇಲ್ವಿಚಾರಣೆ ನಿಯಂತ್ರಣ ಮಾಡುವದು .

೪. ಅಕಾಡೆಮಿಯ ಮತ್ತು ಅಕಾಡೆಮಿಯಿಂದ ನೇಮಕಗೊಂಡ ಎಲ್ಲ ಸಮಿತಿಗಳು ಸಭೆ ನಡೆಸುವ ಬಗ್ಗೆ ನೋಟೀಸುಗಳನ್ನು ನೀಡುವದು

೫. ಈ ಎಲ್ಲ ಸಭೆಗಳ ನಡುವಳಿಕೆಗಳನ್ನು ಸಿದ್ಧಪಡಿಸುವದು ಮತ್ತು ನಿರ್ವಹಿಸುವದು .

೬. ಅಕಾಡೆಮಿಯಿಂದ ಪರವಾಗಿ ಕರಾರುಗಳಿಗೆ ರುಜು ಹಾಕುವದು .

೭. ಚಾಲ್ತಿ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ  ಪಾರದರ್ಶಕತೆ ಅಧಿನಿಯಮ , ಸರ್ಕಾರಿ ಆರ್ಥಿಕ ಸಂಹಿತೆ ಹಾಗು ಸಾದಿಲ್ವಾರು ನಿಯಮಗಳ ವ್ಯಾಪ್ತಿಗೊಳಪಟ್ಟು  ವೆಚ್ಚವನ್ನು  ಭರಿಸುವದು . ಆಕಾಡೆಮಿಯ ಕಾರ್ಯಚಟುವಟಿಕೆ ಹಾಗು ಲೆಕ್ಕಪತ್ರಗಳ ತ್ರೈಮಾಸಿಕ  ವರದಿಯನ್ನು ಕನ್ನಡ ಮತ್ತು ಸಂಸ್ಕೃತಿ ನಿರ್ದೇಶಕರಿಗೆ ಸಲ್ಲಿಸುವದು .

೮. ಸ್ವತ್ತು  ಮತ್ತು ವಿನಿಯೋಗಗಳ  ವ್ಯವಸ್ಥೆ ನೋಡಿಕೊಳ್ಳಬೇಕು. ವಾರ್ಷಿಕ ಅಂದಾಜುಗಳನ್ನು ಮತ್ತು ಲೆಕ್ಕ ಪತ್ರಗಳ ವಿವರಣೆಗಳನ್ನು ಅರ್ಥ ಸದಸ್ಯರ ಸಮಾಲೋಚನೆಯಿಂದ ತಯಾರಿಸುವ ಮತ್ತು ಅಕಾಡೆಮಿಯಿಂದ ಅವುಗಳನ್ನು ಒಪ್ಪಿಸುವ ಜವಾಬ್ದಾರಿ ಹೊಂದಿರಬೇಕು .

೯. ಅಕಾಡೆಮಿಯಿಂದ ಲೆಕ್ಕ ಪತ್ರಗಳನ್ನು ನಿರ್ವಹಿಸುವದು ಮತ್ತು ಅಕಾಡೆಮಿಗೆ ಸಂದಾಯವಾಗುವ ಯಾವುದೇ ಹಣಕ್ಕೆ ರಸೀದಿ ಹಾಕುವದು.

೧೦. ವರ್ಷದ ಆಯವ್ಯಯದ ಪರಿಮಿತಿಯಲ್ಲಿ ಹಾಗು ಆರ್ಥಿಕ ನಿಯಮಗಳಿಗೊಳಪಟ್ಟು  ವಾರ್ಷಿಕ  ಕ್ರೀಯಾ ಯೋಜನೆಯನ್ನು ಸ್ಥಾಯಿ ಸಮಿತಿಯ ಮೂಲಕ ಪೂರ್ವಭಾವಿಯಾಗಿ ರೂಪಿಸಿ ಸರ್ಕಾರದ ಅನುಮೋದನೆಗೆ ಸಲ್ಲಿಸಬೇಕು. ಅನುಮೋದಿತವಾದ ಈ ಕ್ರೀಯಾ ಯೋಜನೆಯ ಪ್ರಕಾರ ಅನುಷ್ಠಾನಗೊಳಿಸಿ ಅದರ ಭೌತಿಕ ಮತ್ತು ಆರ್ಥಿಕ ಪ್ರಗತಿಯ ವರದಿಯನ್ನು ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯದ  ಮೂಲಕ ಮೂರು ತಿಂಗಳಿಗೊಮ್ಮೆ ಸರ್ಕಾರಕ್ಕೆ ಸಲ್ಲಿಸಬೇಕು .